ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಹೊಸಮನಿ ಇವರ ತಾಯಿ ಅನ್ನಪೂರ್ಣಮ್ಮ ಗಂಡ ದಿ. ಶಂಕರಗೌಡ ಹೊಸಮನಿ ಇವರು ಇಂದು (ಶನಿವಾರ) ಮಧ್ಯಾಹ್ನ 4 ಗಂಟೆಗೆ ನಿಧನರಾಗಿರುತ್ತಾರೆ. ಇವರ ಅಂತ್ಯಕ್ರಿಯೆಯು ರವಿವಾರ ಬೆಳಗ್ಗೆ 11 ಗಂಟೆಗೆ ಸಿದ್ದಾಪುರ ಗ್ರಾಮದಲ್ಲಿ ನೆರವೇರಲಿ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅನ್ನಪೂರ್ಣಮ್ಮ ಅವರ ಪತಿ ದಿ.ಶಂಕರಗೌಡ ಹೊಸಮನಿ ಅವರು ಸಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು.
ಅನ್ನಪೂರ್ಣಮ್ಮ ಅವರು ಇಬ್ಬರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅನ್ನಪೂರ್ಣಮ್ಮ ಅವರು ನಿಧನರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ, ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
Tags
ಕೊಪ್ಪಳ ಸುದ್ದಿ
