ಕಾರಟಗಿ, ಸೆ.25: ಕರ್ನಾಟಕ ಸರ್ಕಾರದ ಸೂಚನೆಯಂತೆ ಕಾರಟಗಿ ತಾಲ್ಲೂಕಿನ ಬೆನ್ನೂರು ಗ್ರಾಮದಲ್ಲಿ ಸೆಪ್ಟೆಂಬರ್ 26ರಂದು (ಶನಿವಾರ) ‘ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರಟಗಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಬೆನ್ನೂರು ಗ್ರಾಮದ ಶ್ರೀ ಕೆಲ್ಲೇಶ್ವರ ಸಮುದಾಯ ಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ತಹಶಿಲ್ದಾರ ಕುಮಾರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಪ್ರಜಾಸೇವೆ ಆಂದೋಲನ’ದ ಅಂಗವಾಗಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ಅಹವಾಲು, ಮನವಿ ಹಾಗೂ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಮನವಿಗಳನ್ನು ನೇರವಾಗಿ ಅಧಿಕಾರಿಗಳಿಗೆ ಸಲ್ಲಿಸಿ, ಅಗತ್ಯ ಪರಿಹಾರ ಹಾಗೂ ಸೂಕ್ತ ಕ್ರಮಕ್ಕಾಗಿ ಮನವಿ ಮಾಡಿಕೊಳ್ಳಬಹುದಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರಟಗಿ ತಾಲ್ಲೂಕಿನ ಬೆನ್ನೂರು ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಮನವಿಗಳೊಂದಿಗೆ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳ: ಶ್ರೀ ಕಲ್ಲೇಶ್ವರ ಸಮುದಾಯ ಭವನ,ಬೆನ್ನೂರು, ಕಾರಟಗಿ ತಾಲ್ಲೂಕು.
ದಿನಾಂಕ: 26-09-2026 (ಶನಿವಾರ).
ಸಮಯ: ಬೆಳಗ್ಗೆ 10.00ರಿಂದ ಸಂಜೆ 4.30ರವರೆಗೆ.
